ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದು ಪರಾರಿಯಾಗಿದ್ದ ಕಾಮುಕ ಅರೆಸ್ಟ್.!
ಬೆಂಗಳೂರು: ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದು ಪರಾರಿಯಾಗಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿ ಸಂತೋಷ್ ಡೆನಿಯಲ್ನನ್ನು ಕೇರಳ ಕೋಝಿಕ್ಕೋರ್ ಬಳಿಯ ಗ್ರಾಮದಿಂದ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಕೋರ್ಟ್ಗೆ ಹಾಜರುಪಡಿಸಿ ವಿಚಾರಣೆಗಾಗಿ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ ಫಾತೀಮಾ 2 ತಂಡ ರಚಿಸಿದ್ದರು.
ಏಪ್ರಿಲ್ 3ರಂದು ಮುಂಜಾನೆ ಆರೋಪಿಯು ಯುವತಿ ಮೇಲೆರಗಿದ್ದ. ಸ್ನೇಹಿತೆ ಜತೆ ಯುವತಿ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದು ಕಿರುಕುಳ ನೀಡಿ ಪರಾರಿಯಾಗಿದ್ದ. ಸಂತ್ರಸ್ತೆಗೂ ಆರೋಪಿಗೂ ಯಾವುದೇ ಪರಿಚಯ ಇರಲಿಲ್ಲ. ಘಟನೆ ಬಳಿಕ ಬೆಂಗಳೂರು ನಗರ ತೊರೆದಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಈ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ದೂರು ನೀಡಿದ್ದರು.