No menu items!
14.5 C
Munich
Thursday, April 16, 2026

ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿ ಸೇರಿ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ‌

Must read

ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿ ಸೇರಿ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ‌

ಬೆಂಗಳೂರು: ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.

ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಎರಡೂ ಪಕ್ಷಗಳ ವಾದಗಳನ್ನು ಆಲಿಸಿ ಶಿಕ್ಷೆ ಕುರಿತು ಆದೇಶವನ್ನು ಕಾಯ್ದಿರಿಸಿದ್ದಾರೆ.

ವಿಚಾರಣೆ ವೇಳೆ ಸಿಬಿಐ ಪರ ಸಹಾಯಕ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿ, “ಈ ಕೊಲೆ ಕೃತ್ಯ ಅತ್ಯಂತ ಹೀನಾಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆಯಾಗಿದೆ. ಆರೋಪಿಗಳು ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ್ದು, ನ್ಯಾಯ ಪ್ರಕ್ರಿಯೆಗೆ ಅಡ್ಡಿಯಾಗಿದೆ. ಹೀಗಾಗಿ ಎಲ್ಲರಿಗೂ ಕಠಿಣ ಜೀವಾವಧಿ ಶಿಕ್ಷೆ ವಿಧಿಸಬೇಕು,” ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಆರೋಪಿಗಳ ಪರ ವಕೀಲರು, ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ನ್ಯಾಯಾಲಯವನ್ನು ಕೋರಿದರು. “ಆರೋಪಿಗಳಿಗೆ ಕುಟುಂಬವಿದ್ದು, ಅವರ ಭವಿಷ್ಯವನ್ನು ಪರಿಗಣಿಸಿ ದಯೆ ತೋರಬೇಕು,” ಎಂದು ವಾದಿಸಿದರು.

ಈ ಹಿನ್ನಲೆಯಲ್ಲಿ, ಬಹು ನಿರೀಕ್ಷಿತ ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದ್ದು, ಪ್ರಕರಣದ ಅಂತಿಮ ತೀರ್ಪಿನತ್ತ ಎಲ್ಲರ ಗಮನ ನೆಟ್ಟಿದೆ.

- Advertisement -spot_img

More articles

- Advertisement -spot_img

Latest article