ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ವಜಾ

Date:

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸೂಚಿಸಿ, ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರಲ್ಲಿ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿತ್ತು. ಆದರೆ, ಇತ್ತೀಚೆಗೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿರುವುದಾಗಿ ಸಿಬಿಐ ಆರೋಪಿಸಿತ್ತು.

ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಗೊಳಿಸುವಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಮತ್ತೆ ಜೈಲು ಸೇರಿದ್ದರು.

ಪ್ರಸ್ತುತ ವಿನಯ್ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇದೀಗ ಹೈಕೋರ್ಟ್ ಸೂಚನೆಯಂತೆ ಜಾಮೀನಿಗಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಾಗಿದೆ.

Share post:

Subscribe

spot_imgspot_img

Popular

More like this
Related

ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ

ಸಂಬಂಧಿಯಿಂದಲೇ ನಟಿ ಕಾವ್ಯಾಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ‘ಗಾಂಧಾರಿ’...

ನರೇಗಾ ಪುನರ್ ಸ್ಥಾಪನೆ ಆಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ನರೇಗಾ ಪುನರ್ ಸ್ಥಾಪನೆ ಆಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೇಂದ್ರ ಸರ್ಕಾರದ...

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ ಬೆಂಗಳೂರು:...

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಮನರೇಗಾ...