No menu items!
9.5 C
Munich
Wednesday, May 6, 2026

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು

Must read

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು

ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ.
ಒಟ್ಟು 21 ಆರೋಪಿಗಳ ಪೈಕಿ 19 ಮಂದಿಯನ್ನು ಕೋರ್ಟ್ ದೋಷಿಗಳೆಂದು ಘೋಷಿಸಿದೆ. 20ನೇ ಮತ್ತು 21ನೇ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ದೋಷಿಗಳನ್ನೆಲ್ಲ ಕಸ್ಟಡಿಗೆ ಪಡೆಯುವಂತೆ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ.
2016ರಲ್ಲಿ ನಡೆದ ಈ ಕೊಲೆ ಪ್ರಕರಣ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನಲ್ಲಿದ್ದಾಗಲೇ ಯೋಗೇಶ್ ಗೌಡ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರಿಂದ ಈ ಪ್ರಕರಣ ಹೆಚ್ಚು ಗಮನ ಸೆಳೆದಿತ್ತು.
ಈ ಪ್ರಕರಣದಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ಹೆಸರು ಹೊರಬಂದಿದ್ದರಿಂದ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಉಂಟಾಗಿತ್ತು. ತನಿಖೆ ನಡೆಸಿದ ಸಿಬಿಐ ಸಲ್ಲಿಸಿದ ಆರೋಪಪಟ್ಟಿಯಲ್ಲಿ ವಿನಯ್ ಕುಲಕರ್ಣಿಯನ್ನು 15ನೇ ಆರೋಪಿಯಾಗಿ ಉಲ್ಲೇಖಿಸಲಾಗಿತ್ತು.

- Advertisement -spot_img

More articles

- Advertisement -spot_img

Latest article