ರಕ್ತಚಂದನ ಸಾಗಿಸುತ್ತಿದ್ದ ಇನ್ನೋವಾ ಕಾರು ಅಪಘಾತ ಮೂವರಿಗೆ ಗಂಭೀರ ಗಾಯ

0
3099

ರಕ್ತ ಚಂದನ ಸಾಗಿಸುತ್ತಿದ್ದ ಕಳ್ಳರ ಕಾರು ಭೀಕರ ಅಪಘಾತಕ್ಕೀಡಾಗಿ ನಜ್ಜುಗುಜ್ಜಾಗಿದ್ದರೂ ಕಳ್ಳರು ಪವಾಡವೆಂಬಂತೆ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ.
ಕಾರು ಹೆದ್ದಾರಿಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ರೀತಿಯಲ್ಲಿ ಗುರುತೇ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿ ಬಿದ್ದಿದೆ. ಕಾರಿನಲ್ಲಿದ್ದ ರಕ್ತಚಂದನ ಕಳ್ಳರಾದ ನಾಗರಾಜು, ನಾ ಗೇಂದ್ರ, ಶ್ರೀನಿವಾಸ್ ಮೂವರಿಗೂ ಗಾಯಗಳಾಗಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.