ಸಮ್ಮಿಶ್ರ ಸರ್ಕಾರ ಬೀಳೋದು ಪಕ್ಕ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸೋದು ನಿಶ್ಚಿತ. ಇದನ್ನು ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇಂದಿಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಕುಮಾರಸ್ವಾಮಿ , ರೇವಣ್ಣ, ಡಿಕೆಶಿ, ಸಿದ್ದರಾಮಯ್ಯ ಅವರ ಸರ್ಕಾರ ಇದೆ. ನಾವಾಗಿಯೇ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ. ಬೇಕಾದರೆ ಕಾದು ನೋಡಿ. ಎಲ್ಲಾ ಬಹಿರಂಗಗೊಳ್ಳುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಸಿದ್ದರಾಮಯ್ಯ ಅವರು ಪ್ರತಿಪಕ್ಷ ನಾಯಕರಾಗುತ್ತಾರೆ ನೋಡುತ್ತಿರಿ. ಇದು ಆಗದಿದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.
ಇನ್ನು ಕರ್ನಾಟಕ ಸರ್ಕಾರ ರೇವಣ್ಣ, ಡಿ.ಕೆ.ಶಿವಕುಮಾರ್, ಪರಮೇಶ್ವರ್ ಅವರಿಗೆ ಮಾತ್ರ ಸೇರಿದ್ದು ಎನ್ನುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.