ಕಿರಿಕ್ ಪಾರ್ಟಿ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಇಬ್ಬರು ಸಹ ಪರಸ್ಪರ ಒಪ್ಪಿಗೆಯಿಂದ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು ಮತ್ತು ಕೆಲವೇ ದಿನಗಳಲ್ಲಿ ಮದುವೆ ಆಗುವುದಾಗಿ ತಿಳಿಸಿದ್ದರು. ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ ಕಾರಣಾಂತರಗಳಿಂದ ಮದುವೆಯನ್ನು ಮುರಿದುಕೊಂಡಿತು.
ಹೀಗೆ ನಿಶ್ಚಿತಾರ್ಥದ ನಂತರ ಮದುವೆ ಮುರಿದು ಬಿದ್ದ ನಂತರ ರಕ್ಷಿತ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದರು. ರಕ್ಷಿತ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಿಂದ ದೂರ ಉಳಿಯಲು ಮದುವೆ ಮುರಿದದ್ದೇ ಕಾರಣ ಎನ್ನಲಾಗುತ್ತಿತ್ತು. ಆದರೆ ಇದೀಗ ಫೇಸ್ ಬುಕ್ ಲೈವ್ ಬಂದ ರಕ್ಷಿತ್ ಶೆಟ್ಟಿ ಅವರು ಅದಕ್ಕೆ ಸ್ಪಷ್ಟವಾದ ಕಾರಣವನ್ನು ನೀಡಿದ್ದಾರೆ. ಅವನೇ ಶ್ರೀಮನ್ನಾರಾಯಣ ಚಿತ್ರದ ಮೇಲೆ ಗಮನ ಹರಿಸುವ ಸಲುವಾಗಿ ನಾನು ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೆ ಹೊರತು ಬೇರೆ ಕಾರಣಗಳಿಂದಲ್ಲ ಎಂದು ಅವರು ತಿಳಿಸಿದ್ದಾರೆ.