ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಹೌದು 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು ಈ ಬಾರಿ ರಜನಿಕಾಂತ್ ಅವರಿಗೆ ಪ್ರಶಸ್ತಿ ಒಲಿದಿದೆ. ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಚಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮಾಡಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದ ರಜನೀಕಾಂತ್ ಅವರಿಗೆ 2019ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲು ಬಹಳ ಸಂತೋಷವಾಗುತ್ತಿದೆ. ನಟನಾಗಿ ನಿರ್ಮಾಪಕನಾಗಿ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ ಎಂದು ಹೊಗಳಿದ್ದಾರೆ. ಈ ಮೂಲಕ ರಜನಿಕಾಂತ್ ದಾದಾ ಫಾಲ್ಕೆ ಪ್ರಶಸ್ತಿ ಪಡೆದುಕೊಂಡ 12ನೇ ದಕ್ಷಿಣ ಭಾರತದ ನಟ ರಾಗಲಿದ್ದಾರೆ.