ರದ್ದಾಗಲಿವೆ ಬಿಪಿಎಲ್ ರೇಷನ್ ಕಾರ್ಡ್!

Date:

ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ ಇದೊಂದು ತುರ್ತು ಮಾಹಿತಿ ಇದೆ. ಸರ್ಕಾರ ತಿಳಿಸಿರೋ ಈ ಮಾಹಿತಿ ನೀಡದೆ ಇದ್ದರೆ ನೀವು ಕೂಡಲೇ ನಿಮ್ ರೇಷನ್ ಕಾರ್ಡ್ ಕಳೆದುಕೊಳ್ಳೋದು ಗ್ಯಾರೆಂಟಿ.

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರೋರು ಈ ಕೂಡಲೇ ನ್ಯಾಯಬೆಲೆ ಅಂಗಡಿಗೆ ತೆರಳಿ ಆಧಾರ್ ಕಾರ್ಡ್ ಜೋಡಣೆ ಹಾಗೂ ಕುಟುಂಬದ ಸದಸ್ಯರ ಬೆರಳಚ್ಚು ನೀಡಲೇಬೇಕು ಅಂತ ಸರ್ಕಾರ ತಿಳಿಸಿದೆ.

ಹೌದು, ಬಿಪಿಎಲ್ ಕಾರ್ಡುದಾರರು ಕೆವೈಸಿ ಮಾಡಿಸದಿದ್ದರೆ, ಅಂತಹವರಿಗೆ ರೇಷನ್ ನೀಡೋದನ್ನೇ ರದ್ದುಗೊಳಿಸಲಾಗುತ್ತೆ ಅಂತ ಆಹಾರ ಮತ್ತು ನಾಗರಿಕ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಮಟ್ಟದಲ್ಲಿರೋ ಮಂದಿಗೆ ಅಂತ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗಿದೆ. ಆದ್ರೆ ಈ ಕಾರ್ಡುಗಳನ್ನು ಮಧ್ಯಮರ್ಗದವರು ಅಲ್ಲದೆ ಕೆಲ ಶ್ರೀಮಂತರೂ ಕೂಡ ಹೊಂದಿರೋದು ಪತ್ತೆಯಾಗಿದೆ. ಈ ಶ್ರೀಮಂತರ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚೋ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಮಾಡಿದ್ದು, ಬಿಪಿಎಲ್ ಕಾರ್ಡ್ ಗೆ ಆಧಾರ್ ಕಾರ್ಡ್ ಜೋಡಣೆ ಮಾಡೋದನ್ನು ಕಡ್ಡಾಯಗೊಳಿಸಿದೆ. ಇನ್ನು ಬಿಪಿಎಲ್ ಕಾರ್ಡ್ ದಾರರು ಮತ್ತು ಕಾರ್ಡ್ ನಲ್ಲಿ ಹೆಸರು ಹೊಂದಿರೋ ಸದಸ್ಯರೂ ಕೂಡ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇದಕ್ಕಾಗಿ ಬೆರಳಚ್ಚು ನೀಡಬೇಕು, ಇಲ್ಲವಾದಲ್ಲಿ ಅಂತಹವರ ಹೆಸರನ್ನು ಬಿಪಿಎಲ್ ಪಟ್ಟಿಯಿಂದಲೇ ಕೈಬಿಡೋದಾಗಿ ಆಹಾರ ಇಲಾಖೆ ತಿಳಿಸಿದೆ.

ಇನ್ನು ಬಿಪಿಎಲ್ ಕಾರ್ಡ್ ಗೆ ಆಧಾರ್ ಕಾರ್ಡು ಜೋಡಣೆ ಮಾಡಲು ಅ.31 ಅಂತಿಮ ದಿನವಾಗಿದೆ. ರಾಜ್ಯದಲ್ಲಿ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೊ?ದಯ ಸೇರಿದಂತೆ ಒಟ್ಟು 1.8 ಕೋಟಿ ಪಡಿತರ ಚೀಟಿ ವಿತರಣೆ ಮಾಡಲಾಗಿದೆ. ಇನ್ನು ಇ-ಕೆವೈಸಿ ಮೂಲಕ ಈವರೆಗೆ ಸುಮಾರು 1.73 ಲಕ್ಷ ಅನಧಿಕೃತ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲಾಗಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 16 ಸಾವಿರಕ್ಕೂ ಹೆಚ್ಚು ಮಂದಿ ಆಧಾರ್ ಕಾರ್ಡ್ ಜೋಡಣೆ ಮಾಡದೇ ತಮ್ಮ ಬಿಪಿಎಲ್ ಕಾರ್ಡ್ ಕಳೆದುಕೊಂಡಿದ್ದಾರೆ. ಹೀಗಾಗಿ ನೀವೇನಾದ್ರೂ ಬಿಪಿಎಲ್ ಕಾರ್ಡ್ ಹೊಂದಿದ್ರೆ ಅಕ್ಟೋಬರ್ 31 ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...