ಉಪಚುನಾವಣೆಯ 15 ಕ್ಷೇತ್ರಗಳ ಪೈಕಿ ಗೋಕಾಕ್ ಕ್ಷೇತ್ರ ಮುಖ್ಯವಾದ ಕ್ಷೇತ್ರ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಇವರ ಗೆಲುವಿಗಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಶ್ರಮಿಸುತ್ತಿದ್ದಾರೆ ಹಾಗು ಅಲ್ಲಿನ ಗೆಲುವಿಗೆ ಗೇಮ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು, ಬಾಲಚಂದ್ರ ಜಾರಕಿಹೊಳಿ ಸದ್ಯ ರಮೇಶ್ ಜಾರಕಿಹೊಳಿಯ ಗೆಲುವಿಗಾಗಿ ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಲಾಗುತ್ತಿದ್ದು, ಯುಪಿ ಮಾದರಿಯಲ್ಲಿ ಚುನಾವಣೆ ಎದುರಿಸಲು ರಣತಂತ್ರ ಹೂಡಿದ್ದಾರೆ ಎನ್ನಲಾಗುತ್ತಿದೆ.