ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಬಸ್ ಗಳಿಗೆ ಕಲ್ಲು ತೂರಾಟ

Date:

ಬೆಳಗಾವಿ : ರಮೇಶ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್​ಗಳ ಮೇಲೆ‌ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.

ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್​ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್​ಗಳಲ್ಲಿ ಬಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್​ನ ಹಿಂಬದಿಯ ಹಾಗೂ ಮುಂಬದಿಯ ಗಾಜುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಕೂಡಲೇ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಬಸ್​ಗಳಲ್ಲಿ ಪೊಲೀಸ್​ ಭದ್ರತೆಯೊಂದಿಗೆ ಕಳುಹಿಸಲಾಗಿದೆ. ಇತ್ತ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೈಲಹೊಂಗಲ, ಗೋಕಾಕ್, ಬೆಳಗಾವಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ವಿವಿಧ ಮಾರ್ಗಗಳಿಗೆ ಸಂಚರಿಸುತ್ತಿದ್ದ ಬಸ್​ಗಳನ್ನು ಗೋಕಾಕ್ ಡಿಪೋದಲ್ಲಿ ನಿಲ್ಲಿಸಲಾಗಿತ್ತು. ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು...

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ!

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ! ಇತ್ತೀಚಿನ ದಿನಗಳಲ್ಲಿ ಚಳಿ ದಿನದಿಂದ...

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...