ರಮ್ಯಾ ಬುಲೆಟ್ ದಾಳಿ ನಡೆಸಿದ ಪ್ರಕಾಶ್..! ಇದಕ್ಕೆ ಕಾರಣ ನರೇಂದ್ರ ಮೋದಿ..!

Date:

ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಈಗ ಸಿನಿಮಾ ರಂಗದಿಂದ ದೂರ ಉಳಿದು ಫುಲ್​ಟೈಮ್ ರಾಜಕಾರಣಿಯಾಗಿ ಬ್ಯುಸಿ ಆಗಿದ್ದಾರೆ. ಕಾಂಗ್ರೆಸ್​ನ ಸೋಶಿಯಲ್ ಮೀಡಿಯಾ ವಿಂಗ್​ ನ ಮುಖ್ಯಸ್ಥೆ ರಮ್ಯಾ ಸದಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವಾಗಿ ಮಾತನಾಡುತ್ತಾ, ಮನಸೋ ಇಚ್ಛೆ ವ್ಯಂಗ್ಯ ಮಾಡಿ ಟ್ವೀಟ್ ಮಾಡುತ್ತಾ ಒಂದಲ್ಲ ಒಂದು ರೀತಿಯಲ್ಲಿ ಸದಾ ಚರ್ಚೆಯಲ್ಲಿರುತ್ತಿದ್ದಾರೆ.

ಮೋದಿಯನ್ನು ಹಿಟ್ಲರ್ ಗೆ ಹೋಲಿಸಿರುವ ಅವರು, ಸರ್ವಾಧಿಕಾರಿ ಹಿಟ್ಲರ್‌ ಹಾಗೂ ನರೇಂದ್ರ ಮೋದಿ ಫೋಟೋ ಮರ್ಜ್​ ಮಾಡಿ ಟ್ವೀಟ್ ಮಾಡಿದ್ದಾರೆ. ಹಿಟ್ಲರ್​ ಮಗುವಿನ ಕೆನ್ನೆ ಚಿವುಟಿ ಮುದ್ದು ಮಾಡುವ ಫೋಟೋ ಮತ್ತು ಮೋದಿಯದ್ದು ಅಂತಹದ್ದೇ ಫೋಟೋ ಕೊಲಾಜ್ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಿ ಅಂತ ಟ್ವೀಟ್ ಮಾಡಿದ್ದಾರೆ. ಇದು ಸಾಕಷ್ಟು ವಿವಾದವನ್ನು ಹುಟ್ಟುಹಾಕಿದೆ,
ನಟ ಬುಲೆಟ್ ಪ್ರಕಾಶ್ ರಮ್ಯಾ ಬಗ್ಗೆ ಕಿಡಿಕಾರಿದ್ದಾರೆ. ರಮ್ಯಾ ಮೇಡಂ (ಪದ್ಮಾವತಿ) ಮಗುವಿನ ವಯಸ್ಸಲ್ಲಿ ನಿಮ್ಮ ತಂದೆ ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನಿಮಗೆ ವಿಶ್ವನಾಯಕ ನರೇಂದ್ರ ಮೋದಿ ಅವರ ಬಗ್ಗೆ ಮಾತಾಡೋಕೆ ಯಾವ್ದೇ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...