ರಶ್ಮಿಕಾ ಅಲ್ಲಾ ಝರಾ: ವೀಡಿಯೋ ಬಗ್ಗೆ ಚಷ್ಮಿ ಹೇಳಿದ್ದೇನು ?

Date:

ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸುದ್ದಿ ಮಾಡುತ್ತಿದೆ. ಅಷ್ಟೇ ಅಲ್ಲದ ಮಹಿಳೆಯರೆಲ್ಲ ಆತಂಕ ಪಡುವಂತಹ ವಿಚಾರವಿದು ಅಂದರು ತಪ್ಪಾಗಲಾರದು. ಈ ಬಗ್ಗೆ ಬಣ್ಣದ ಲೋಕದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಹಿರಿಯ ನಟ ಅಮಿತಾಭ್ ಬಚ್ಚನ್ , ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವರು ರಿಯಾಕ್ಟ್ ಮಾಡಿದ್ದಾರೆ. ಇನ್ನೂ ಈ ಬಗ್ಗೆ ಸ್ವತಃ ರಶ್ಮಿಕಾ ಕೂಡಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನೋವನ್ನ ಹಂಚಿಕೊಂಡಿದ್ದಾರೆ.


ಝರಾ ಪಾಟೀಲ್‌ ಎಂಬ ಬ್ರಿಟಿಷ್‌ ಭಾರತೀಯ ಮಹಿಳೆಯು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ವಿಡಿಯೋಗೆ ಝರಾ ಪಾಟೀಲ್‌ ಮುಖದ ಬದಲು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್​ ಬಳಸಿ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಹೊಂದಿಸಲಾಗಿದೆ. ಈ ವಿಡಿಯೋ ಕಂಡಾಕ್ಷಣ ಉಡುಗೆ-ತೊಡುಗೆಯಲ್ಲಿ ಸಭ್ಯ ಎಂದು ಅನಿಸುವುದಿಲ್ಲ.

ಈ ಬಗ್ಗೆ ಟ್ವೀಟ್​ ಮಾಡಿರುವ ರಶ್ಮಿಕಾ, “ಇದನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗುತ್ತಿದೆ. ಆನ್‌ಲೈನ್‌ನಲ್ಲಿ ಹರಡಿರುವ ನನ್ನ ಡೀಪ್‌ಫೇಕ್ ವೀಡಿಯೊದ ಬಗ್ಗೆ ಮಾತನಾಡಲೇಬೇಕಾಗಿದೆ. ಈ ರೀತಿಯ ವಿಷಯವು ನನಗೆ ಮಾತ್ರವಲ್ಲ, ಪ್ರಾಮಾಣಿಕವಾಗಿ ಹೇಳುವುದಾದರೆ ತಂತ್ರಜ್ಞಾನವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎನ್ನುವುದು ಇಂದು ತುಂಬಾ ತೊಂದರೆಗೆ ಗುರಿಯಾಗುವ ನಮ್ಮಲ್ಲಿ ಪ್ರತಿಯೊಬ್ಬರಿಗೂ ಅತ್ಯಂತ ಭಯಾನಕವಾಗಿದೆ” ಎಂದಿದ್ದಾರೆ.

“ನನ್ನ ರಕ್ಷಣೆ ಮತ್ತು ಬೆಂಬಲಕ್ಕೆ ನಿಂತ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ಇಂದು ಒಬ್ಬ ಮಹಿಳೆಯಾಗಿ ಮತ್ತು ನಟಿನಾಗಿ ನಾನು ಕೃತಜ್ಞಳಾಗಿದ್ದೇನೆ. ಆದರೆ ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಹೀಗಾಗಹಿದ್ದರೆ ನಾನು ಇದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ನನಗೆ ನಿಜವಾಗಿಯೂ ಊಹಿಸಲು ಸಾಧ್ಯವಿಲ್ಲ” ಎಂದು ರಶ್ಮಿಕಾ ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲಿ ಇನ್ನೂ ಹೆಚ್ಚಿನವರು ಇಂತಹ ಐಡೆಂಟಿಟಿ ಥೆಫ್ಟ್​ಗೆ ಗುರಿಯಾಗುವ ಮೊದಲು ನಾವು ಇಂದು ಸಮುದಾಯವಾಗಿ ಇದನ್ನ ತುರ್ತಾಗಿ ಪರಿಹರಿಸಬೇಕಾಗಿದೆ” ಎಂದು ರಶ್ಮಿಕಾ ಮಂದಣ್ಣ ಕರೆ ನೀಡಿದ್ದಾರೆ.

ಈ ಬಗ್ಗ ಎಕ್ಸ್ ನಲ್ಲಿ ಟ್ವಿಟ್ ಮಾಡಿರುವ ಹಿರಿಯ ನಟ ಅಮಿತಾಭ್ ಬಚ್ಚನ್ “ಇದಕ್ಕೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವರಾದ ರಾಜೀವ್‌ ಚಂದ್ರಶೇಖರ್‌ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಇಂಟರ್‌ನೆಟ್‌ ಬಳಸುವ ಡಿಜಿಟಲ್‌ ನಾಗರಿಕರ ಸುರಕ್ಷತೆ ಮತ್ತು ನಂಬಿಕೆ ಉಳಿಸಲು ಬದ್ಧವಾಗಿದೆ ಎಂದ ಅವರು ಹೇಳಿ ಐಟಿ ನಿಯಮವನ್ನು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...