ರಶ್ಮಿಕಾ ನೆಚ್ಚಿನ ಐಪಿಎಲ್ ತಂಡ ಯಾವುದು ಗೊತ್ತಾ?

Date:

ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ನಟನೆಯನ್ನು ಆರಂಭಿಸಿ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯ ಹಲವಾರು ಚಿತ್ರಗಳಲ್ಲಿ ಅಭಿನಯಿಸಿ ನ್ಯಾಷನಲ್ ಕ್ರಶ್ ಎಂದು ಕರೆಸಿಕೊಂಡಿರುವ ರಶ್ಮಿಕಾ ಮಂದಣ್ಣ ಇತ್ತೀಚಿಗಷ್ಟೆ ತಮ್ಮ ಇನ್ ಸ್ಟಾಗ್ರಾಂ ಖಾತೆಯ ಮೂಲಕ ಲೈವ್ ಬಂದಿದ್ದರು. ಈ ವೇಳೆ ಅಭಿಮಾನಿಯೊಬ್ಬರು ರಶ್ಮಿಕಾ ಮಂದಣ್ಣ ಅವರಿಗೆ ನಿಮ್ಮ ನೆಚ್ಚಿನ ಐಪಿಎಲ್ ತಂಡ ಯಾವುದು ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಅಭಿಮಾನಿ ಕೇಳಿದ ಈ ಪ್ರಶ್ನೆಗೆ ರಶ್ಮಿಕಾ ಮಂದಣ್ಣ ‘ಈ ಸಲ ಕಪ್ ನಮ್ದೆ’ ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಸದ್ಯ ರಶ್ಮಿಕಾ ಮಂದಣ್ಣ ಅವರ ಈ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ರಶ್ಮಿಕಾ ಕೊಟ್ಟ ಉತ್ತರಕ್ಕೆ ಫಿದಾ ಆಗಿದ್ದಾರೆ. ಇತ್ತ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ 4 ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಐದನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೀನಾಯ ಸೋಲನ್ನು ಕಂಡಿದೆ. ಚೆನ್ನೈ ವಿರುದ್ಧದ ಸೋಲು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದ ಪರಿಣಾಮ ಪ್ರಸ್ತುತ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ.

 

 

ಮಂಗಳವಾರ ( ಏಪ್ರಿಲ್ 27 ) ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣಸಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ಸಿನ ಹಾದಿಗೆ ಮರಳುತ್ತಾ ಎಂಬುದನ್ನು ಕಾದು ನೋಡಬೇಕು. ಇದೇ ಮೊದಲ ಬಾರಿಗೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂದ್ಯವನ್ನು ಆಡುತ್ತಿದ್ದು ಯಾವ ರೀತಿಯ ಪ್ರದರ್ಶನವನ್ನು ನೀಡಲಿದೆ ಎಂಬುದು ಕುತೂಹಲವನ್ನು ಮೂಡಿಸಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...