ರಶ್ಮಿಕಾ ಹುಟ್ಟುಹಬ್ಬಕ್ಕೆ ರಕ್ಷಿತ್ ಶೆಟ್ಟಿ ಏನಂಥಾ ವಿಶ್‌ಮಾಡಿದ್ದಾರೆ?

Date:

ಬೆಂಗಳೂರು: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರಿಗೆ ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ವಿಶ್‍ಮಾಡಿ ಹಳೆ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ನಾನು ನಿಮ್ಮ ಸುಂದರವಾದ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದೇನೆ. ಅಂದು ಆಡಿಷನ್ ಮಾಡಿರುವ ದಿನದಿಂದ ಇಲ್ಲಿಯವರೆಗೂ ನಿಮ್ಮ ಸಿನಿಮಾ ಜರ್ನಿ ತುಂಬಾ ದೂರದವರೆಗೂ ಸಾಗಿದೆ. ನಿಮ್ಮ ಕನಸಗಳನ್ನು ಬೆನ್ನಟ್ಟಿ ನೀವು ಸಾಗುತ್ತಿದ್ದೀರಾ. ಈ ಕುರಿತಾಗಿ ನನಗೆ ಹೆಮ್ಮೆ ಇದೆ. ನಾನು ನಿಮ್ಮ ಇನ್ನಷ್ಟು ಯಶಸ್ಸನ್ನು ನೋಡಲು ಬಯಸುತ್ತೇನೆ. ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡು ಕಿರಿಕ್ ಪಾರ್ಟಿ ಸಿನಿಮಾದ ಆಡಿಷನ್ ವೀಡಿಯೋವನ್ನು ರಕ್ಷಿತ್ ಶೆಟ್ಟಿ ಹಂಚಿಕೊಂಡಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 25 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಶೇರ್ ಮಾಡುವ ಮೂಲಕವಾಗಿ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ತಮ್ಮದೇ ಆಗಿರುವ ನಟನಾ ಶೈಲಿಯ ಮೂಲಕವಾಗಿ ಹೆಸರು ಮಾಡಿರುವ ಕೊಡಗಿನ ಕುವರಿಗೆ ಆಪ್ತರು, ಸೆಲೆಬ್ರೆಟಿಗಳು, ಸ್ನೇಹಿತರು, ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡುವ ಜೊತೆಗೆ ‘ನ್ಯಾಷನಲ್ ಕ್ರಶ್ ರಶ್ಮಿಕಾ’ ಎಂದು ಟ್ರೆಂಡ್ ಮಾಡುತ್ತಿದ್ದಾರೆ. ಎಲ್ಲಾ ಭಾಷೆಯ ಸಿನಿಮಾಗಳಲ್ಲಿ ಬೇಡಿಕೆ ನಟಿಯಾಗಿ ಗುರುತಿಸಿಕೊಂಡಿರುವ ನಟಿ ರಶ್ಮಿಕಾ ಸ್ಟಾರ್ ನಟರ ಜೊತೆ ತೆರೆಹಂಚಿಕೊಳ್ಳುತ್ತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ರಕ್ಷಿತ್ ಶೆಟ್ಟಿ, ರಶ್ಮಿಕಾ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡುತ್ತಾರಾ ಎಂದು ಕಾಯುತ್ತಾ ಕುಳಿತಿದ್ದ ಅಭಿಮಾನಿಗಳಿಗೆ ಈ ಒಂದು ವಿಶ್ ನೋಡಿ ಸಖತ್ ಖುಷಿಯಾಗಿದೆ. ರಶ್ಮಿಕಾ ಒಂದು ಸಂದರ್ಶನದಲ್ಲಿ ರಕ್ಷಿತ್ ಅವರ ಜೊತೆಗೆ ಮತ್ತೆ ಸಿನಿಮಾದಲ್ಲಿ ನಟಿಸುವ ಆಸೆಯನ್ನು ಹೇಳಿಕೊಂಡಿದ್ದರು. ಈ ಜೋಡಿ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಾ ಎಂಬುದನ್ನು ಕಾದುನೋಡಬೇಕಿದೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...