ರಷ್ಯಾ ಪ್ರವಾಸ ದಿಢೀರ್ ರದ್ದು ಮಾಡಿದ ಪ್ರಧಾನಿ ನರೇಂದ್ರ ಮೋದಿ!
ನವದೆಹಲಿ:- ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಪ್ರವಾಸ ದಿಢೀರ್ ರದ್ದಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆ, ಮೇ 9 ರಂದು ನಡೆಯಲಿರುವ ರಷ್ಯಾದ ವಿಜಯ ದಿವಸ್ ಆಚರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಗೈರಾಗಲಿದ್ದಾರೆ ಎಂದು ವರದಿಯಾಗಿದೆ.
ದೇಶದ ಭದ್ರತಾ ಕಾಳಜಿಯಿಂದ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾರತದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾಕ್ಕೆ ತೆರಳುವ ಸಾಧ್ಯತೆ ಇದೆ. ಚೀನಾ ಅಧ್ಯಕ್ಷ್ಯ ಕ್ಸಿ ಜಿನ್‌ಪಿಂಗ್ ಸೇರಿದಂತೆ ಇತರ ವಿಶ್ವ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ
ಮೋದಿಯವರ ನಿರ್ಧಾರದ ಹಿಂದಿನ ಕಾರಣವನ್ನು ರಷ್ಯಾದ ಅಧಿಕಾರಿಗಳು ಸ್ಪಷ್ಟಪಡಿಸದಿದ್ದರೂ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.