ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಬೈಕನಲ್ಲಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸ್!

Date:

ಚಿಕ್ಕಬಳ್ಳಾಪುರ: ಲಾಕ್‍ಡೌನ್ ಹಿನ್ನೆಲೆ ನಡೆದುಕೊಂಡು ಆಸ್ಪತ್ರೆಗೆ ಹೋಗುವಾಗ ನಡುರಸ್ತೆಯಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ತನ್ನ ಬೈಕ್ ಮೂಲಕ ಪೊಲೀಸ್ ಪೇದೆ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

ಗೂಳೂರು ಗ್ರಾಮದಿಂದ ಬಾಗೇಪಲ್ಲಿ ಪಟ್ಟಣಕ್ಕೆ ಬಂಧಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಆಟೋದಲ್ಲಿ ಬಾಗೇಪಲ್ಲಿ ಪಟ್ಟಣಕ್ಕೆ ಬಂದಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸ್ ನಾಕಬಂದಿ ಕಂಡು ಆಟೋ ಚಾಲಕ ದೂರದಲ್ಲಿ ಅವರನ್ನು ಇಳಿಸಿ ಹೊರಟುಹೋಗಿದ್ದ.

ಈ ವೇಳೆ ನಡೆದುಕೊಂಡು ಆಸ್ಪತ್ರೆಗೆ ಹೋಗುವಾಗ ಮಹಿಳೆ ಕುಸಿದುಬಿದ್ದಿದ್ದಾಳೆ.ಈ ವೇಳೆ ಕರ್ತವ್ಯ ನಿರತ ಬಾಗೇಪಲ್ಲಿ ಪೊಲೀಸ್ ಠಾಣೆಯ ಕಾನಸ್ಟೇಬಲ್ ಧನಂಜಯ ಮಹಿಳೆಯನ್ನು ತನ್ನ ಬೈಕ್‍ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಬಿಟ್ಟಿದ್ದಾರೆ. ಒಂದು ಕಡೆ ಲಾಕ್‍ಡೌನ್ ವೇಳೆ ರಸ್ತೆಗೆ ಇಳಿತಿರೋ ಜನರಿಗೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಅಂತ ಪೊಲೀಸರ ಬಗ್ಗೆ ಹರಿಹಾಯ್ತಿದ್ದಾರೆ. ಆದರೆ ಪೊಲೀಸರು ಸಹ ಮನುಷ್ಯರೇ ಅವರಲ್ಲಿ ಮಾನವೀಯತೆ ಇದೆ ಎನ್ನುವುದು ಪೊಲೀಸ್ ಪೇದೆಯ ಸಮಯಪ್ರಜ್ಣೆ ಮಾನವೀಯತೆ ಕಾರ್ಯ ಎಲ್ಲರು ಮೆಚ್ಚುವಂತದ್ದಾಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...