ರಸ್ತೆ ಅಪಘಾತದಲ್ಲಿ ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ಸಾವು!
ಪ್ರಯಾಗ್‌ರಾಜ್ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕಪ ಅಪಘಾತ ಸಂಭವಿಸಿ ಬೆಳಗಾವಿ ಗೋಕಾಕ್ ನಗರದ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ನಡೆದಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಮುಕ್ತಾಯವಾಗಲು ಇನ್ನೆರಡು ದಿನ ಬಾಕಿಯಿದೆ. ಮಹಾ ಶಿವರಾತ್ರಿಯ ದಿನದಂದೇ ಕುಂಭಮೇಳ ಅಂತ್ಯವಾಗಲಿದೆ.