No menu items!
11.2 C
Munich
Sunday, May 3, 2026

ರಸ್ತೆ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ದಂಪತಿ ದುರ್ಮರಣ!

Must read

ರಸ್ತೆ ಅಪಘಾತ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ದಂಪತಿ ದುರ್ಮರಣ!

 

ಕೊಪ್ಪಳ:- ರಸ್ತೆ ಅಪಘಾತದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ಜರುಗಿದೆ.

ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. 38 ಮಂಜುನಾಥ ನಾಯಕ್ ಹಾಗೂ ಪತ್ನಿ ನೇತ್ರಾವತಿ ನಾಯಕ್ ಮೃತರು.

ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -spot_img

More articles

- Advertisement -spot_img

Latest article