ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಸೇರ್ಪಡೆಗೊಂಡು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಾರೆ ಎಂದು ಹೇಳಲಾಗಿದ್ದು, ರಾಗಿಣಿ ಬಿಜೆಪಿ ಸೇರ್ಪಡೆಗೆ ವೇದಿಕೆಯೂ ಸಿದ್ಧವಾಗಿತ್ತು.
ಇದಕ್ಕಾಗಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶಾಸಕ ಅಶ್ವತ್ ನಾರಾಯಣ ಗಂಟೆಗಳ ಕಾಲ ಕಾದರೂ ರಾಗಿಣಿ ಬಾರದೆ ಕಡೆ ಕ್ಷಣದಲ್ಲಿ ‘ಕೈ’ ಕೊಟ್ಟಿದ್ದಾರೆ.
ರಾಗಿಣಿ ಅವರ ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಬ್ರೇಕ್ ಹಾಕಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಆದರೆ ಇದನ್ನು ತಳ್ಳಿ ಹಾಕಿರುವ ಬಿಜೆಪಿ ನಾಯಕರು, ಅರವಿಂದ ಲಿಂಬಾವಳಿ ತುರ್ತಾಗಿ ಚಾಮರಾಜನಗರ ಪ್ರವಾಸ ಕೈಗೊಂಡಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಸಹ ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ಪಕ್ಷ ಸೇರ್ಪಡೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.