ಕಳೆದ ತಿಂಗಳಿಂದ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಅವರು ಜಂಜಾಟದಿಂದ ಹೊರಬರಲು ಕಾಫಿತೋಟದ ಪ್ರಶಾಂತ ವಾತಾವರಣದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ನೇಹಿತನ ಮನೆಯಲ್ಲಿ ತಂಗಿದ್ದ ಕುಮಾರಸ್ವಾಮಿ ಪ್ರಶಾಂತ ವಾತಾವರಣದಲ್ಲಿ ಕಾಲ ಕಳೆದಿದ್ದಾರೆ.

ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಚಿಕ್ಕಮಗಳೂರಿಗೆ ಆಗಮಿಸಿದ್ದ ಕುಮಾರಸ್ವಾಮಿ, ಗೆಳೆಯನ ಮನೆಯಲ್ಲಿ ತಂಗಿದ್ದು, ಅವರೊಂದಿಗೆ ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನಪರಿಷತ್ ಸದಸ್ಯ ಭೋಜೇಗೌಡ ಇದ್ದಾರೆ. ಶನಿವಾರ ಕುಮಾರಸ್ವಾಮಿ ಮಂಡ್ಯ ಪ್ರವಾಸ ಕೈಗೊಂಡಿದ್ದಾರೆ.






