ರಾಜಕೀಯ ದುರುದ್ದೇಶಕ್ಕೆ ಕೇಂದ್ರ ಸರ್ಕಾರ ಇಡಿಯನ್ನು ಬಳಕೆ ಮಾಡಿಕೊಳ್ತಿದೆ: ಯತೀಂದ್ರ ಸಿದ್ದರಾಮಯ್ಯ
ಮೈಸೂರು: ರಾಜಕೀಯ ದುರುದ್ದೇಶಕ್ಕೆ ಕೇಂದ್ರ ಸರ್ಕಾರ ಇಡಿಯನ್ನು ಬಳಕೆ ಮಾಡಿಕೊಳ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈ ಸಂಬಂಧ ಇಡಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ರಾಜಕೀಯ ದುರುದ್ದೇಶಕ್ಕೆ ಕೇಂದ್ರ ಸರ್ಕಾರ ಇಡಿಯನ್ನು ಬಳಕೆ ಮಾಡಿಕೊಳ್ತಿದೆ.
ಸುಮ್ಮನೆ ತನಿಖೆ ಹೆಸರಲ್ಲಿ ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಇದುವರೆಗೂ ಇಡಿ ತನಿಖೆ ಯಾವುದೇ ತಾತ್ವಿಕ ಅಂತ್ಯ ತಲುಪಿಲ್ಲ. ಸಿದ್ದರಾಮಯ್ಯ ಹಾಗೂ ನಮ್ಮ ಕುಟುಂಬ ಯಾವುದೇ ತಪ್ಪು ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟರು ಅಂತಾ ಬಿಂಬಿಸಲು ಯತ್ನಿಸಲಾಗುತ್ತಿದೆ.
ಈ ಮೂಲಕ ಸಿದ್ದರಾಮಯ್ಯ ರಾಜೀನಾಮೆ ಕೊಡಿಸಲು ತಂತ್ರ ಹೂಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಬಿಜೆಪಿಯಲ್ಲೇ ಆಂತರಿಕ ಕಲಹ ಇದೆ, ದಿನ ಬೆಳಗಾದರೆ ಕಚ್ಚಾಟ ನಡೆಯುತ್ತಿದೆ. ಸುಖಾ ಸುಮ್ಮನೆ ನಮ್ಮ ಪಕ್ಷದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಯತೀಂದ್ರ ಹೇಳಿದರು.