ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ: ಸಚಿವ ಕೆಎನ್ ರಾಜಣ್ಣ
ತುಮಕೂರು: ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಲ್ಲಿ ಮಾತನಾಡಿದ ಅವರು, ಕ್ರಾಂತಿ ಎಂದರೇ ಹಲವಾರು ರೀತಿಯ ಕ್ರಾಂತಿ ಇದೆ. ಜಗಜೀವನ್ ರಾಮ್ ಹಸಿರು ಕ್ರಾಂತಿ ಮಾಡಿಲ್ವಾ? ರಷ್ಯಾದ ಕ್ರಾಂತಿಯೂ ಸಹ ಅಕ್ಟೋಬರ್ನಲ್ಲಾಗಿರೋದು. ನಾನು ಹೇಳಿದ ತಕ್ಷಣ ಬರೀ ಕಾಂಗ್ರೆಸ್ನಲ್ಲಿ ಮಾತ್ರ ಕ್ರಾಂತಿ ಆಗುತ್ತದೆ ಅಂದುಕೊಳ್ಳಬಾರದು.
ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕ್ರೇಂದ್ರ ಸರ್ಕಾರದಲ್ಲೂ ಸಹ ಬದಲಾವಣೆ ನಿರೀಕ್ಷೆ ಮಾಡಬಹುದು. ಆರ್ಎಸ್ಎಸ್ನವರ ಸೆಟ್ ಆಫ್ ಪ್ರಿನ್ಸಿಪಲ್ನಂತೆ 75 ವರ್ಷದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಕ್ಕಿಲ್ಲ. ಹಾಗಾಗಿಯೇ ಅಡ್ವಾಣಿಗೆ ಪ್ರಧಾನಿ ಸ್ಥಾನ ಸಿಕ್ಕಿಲ್ಲ. ಈಗ ಅದೇ ಪ್ರಿನ್ಸಿಪಲ್ ಮೋದಿಯವರಿಗೂ ಅನ್ವಯಿಸುತ್ತದೆ. ಅದು ಒಂದು ಬದಲಾವಣೆ ಕ್ರಾಂತಿ ಅಲ್ವಾ?
ಅದನ್ನು ಯಾಕೆ ನೀವು ಊಹೆ ಮಾಡಲ್ಲ? ಬರೀ ಕರ್ನಾಟಕದ ಕಾಂಗ್ರೆಸ್ ಪಾರ್ಟಿಯನ್ನು ಯಾಕೆ ಊಹೆ ಮಾಡ್ತೀರಾ? ಸಿಎಂ ಬದಲಾಯಿಸುತ್ತಾರೆ, ಸಂಪುಟ ವಿಸ್ತರಣೆ, ಅಧ್ಯಕ್ಷ ಬದಲಾವಣೆ, ಬರೀ ಇದರ ಬಗ್ಗೆ ಯಾಕೆ ಚರ್ಚೆ ಮಾಡುತ್ತೀರಾ? ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ. ರಾಜಿಕೀಯ ಸಂದರ್ಭಕ್ಕೆ ಅನುಗುಣವಾಗಿ ಬದಲಾಗುತ್ತದೆ ಎಂದು ತಿಳಿಸಿದರು.