No menu items!
15.2 C
Munich
Wednesday, April 29, 2026

ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ: ಸಚಿವ ಕೆಎನ್ ರಾಜಣ್ಣ

Must read

ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ: ಸಚಿವ ಕೆಎನ್ ರಾಜಣ್ಣ

 

ತುಮಕೂರು: ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಲ್ಲಿ ಮಾತನಾಡಿದ ಅವರು, ಕ್ರಾಂತಿ ಎಂದರೇ ಹಲವಾರು ರೀತಿಯ ಕ್ರಾಂತಿ ಇದೆ. ಜಗಜೀವನ್ ರಾಮ್ ಹಸಿರು ಕ್ರಾಂತಿ ಮಾಡಿಲ್ವಾ? ರಷ್ಯಾದ ಕ್ರಾಂತಿಯೂ ಸಹ ಅಕ್ಟೋಬರ್ನಲ್ಲಾಗಿರೋದು. ನಾನು ಹೇಳಿದ ತಕ್ಷಣ ಬರೀ ಕಾಂಗ್ರೆಸ್ನಲ್ಲಿ ಮಾತ್ರ ಕ್ರಾಂತಿ ಆಗುತ್ತದೆ ಅಂದುಕೊಳ್ಳಬಾರದು.

ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕ್ರೇಂದ್ರ ಸರ್ಕಾರದಲ್ಲೂ ಸಹ ಬದಲಾವಣೆ ನಿರೀಕ್ಷೆ ಮಾಡಬಹುದು. ಆರ್ಎಸ್ಎಸ್ನವರ ಸೆಟ್ ಆಫ್ ಪ್ರಿನ್ಸಿಪಲ್ನಂತೆ 75 ವರ್ಷದ ನಂತರ ಯಾವುದೇ ಹುದ್ದೆಯಲ್ಲಿ ಇರಲಿಕ್ಕಿಲ್ಲ. ಹಾಗಾಗಿಯೇ ಅಡ್ವಾಣಿಗೆ ಪ್ರಧಾನಿ ಸ್ಥಾನ ಸಿಕ್ಕಿಲ್ಲ. ಈಗ ಅದೇ ಪ್ರಿನ್ಸಿಪಲ್ ಮೋದಿಯವರಿಗೂ ಅನ್ವಯಿಸುತ್ತದೆ. ಅದು ಒಂದು ಬದಲಾವಣೆ ಕ್ರಾಂತಿ ಅಲ್ವಾ?

ಅದನ್ನು ಯಾಕೆ ನೀವು ಊಹೆ ಮಾಡಲ್ಲ? ಬರೀ ಕರ್ನಾಟಕದ ಕಾಂಗ್ರೆಸ್ ಪಾರ್ಟಿಯನ್ನು ಯಾಕೆ ಊಹೆ ಮಾಡ್ತೀರಾ? ಸಿಎಂ ಬದಲಾಯಿಸುತ್ತಾರೆ, ಸಂಪುಟ ವಿಸ್ತರಣೆ, ಅಧ್ಯಕ್ಷ ಬದಲಾವಣೆ, ಬರೀ ಇದರ ಬಗ್ಗೆ ಯಾಕೆ ಚರ್ಚೆ ಮಾಡುತ್ತೀರಾ? ರಾಜಕೀಯ ನಿಂತ ನೀರಲ್ಲ, ಅದು ಬದಲಾಗುತ್ತಿರುತ್ತದೆ. ರಾಜಿಕೀಯ ಸಂದರ್ಭಕ್ಕೆ ಅನುಗುಣವಾಗಿ ಬದಲಾಗುತ್ತದೆ ಎಂದು ತಿಳಿಸಿದರು.

Previous article
ವಿಷ ಪ್ರಾಶನದಿಂದ 5 ಹುಲಿಗಳ ಸಾವು: ಕೊನೆಗೂ ಮೂವರು ವಶಕ್ಕೆ, ಚುರುಕುಗೊಂಡ ತನಿಖೆ   ಚಾಮರಾಜನಗರ: ಹುಲಿಗಳ ನಾಡೆಂದೇ ಪ್ರಖ್ಯಾತಿಯಾದ ಚಾಮರಾಜನಗರ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಮಿಣ್ಯಂ ಅರಣ್ಯದಲ್ಲಿ ಹುಲಿಗಳು ಮೃತಪಟ್ಟಿರುವುದು ಕಂಡುಬಂದಿದ್ದು, ಒಂದೇ ದಿನ ಐದು ಹುಲಿಗಳು ಸಾವನ್ನಪ್ಪಿರುವ ದುರಂತ ದೇಶದಲ್ಲೇ ಮೊದಲು. ಇನ್ನು ಸಾವಿಗೆ ಕಾರಣವಾದ ಪ್ರಕರಣದಲ್ಲಿ ಮೂವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದು, ವಿಚಾರಣೆ ನಡೆಸಿದ್ದಾರೆ. ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಮತ್ತು ಕೂನಪ್ಪ ಬಂಧಿತರು. ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡಲಾಗುತ್ತಿದೆ. ಮಾದ ಅಲಿಯಾಸ್ ಮಾದುರಾಜುಗೆ ಸೇರಿದ್ದ ಕೆಂಚಿ ಎಂಬ ಹೆಸರಿನ ಹಸುವನ್ನು ಹುಲಿ ಬಲಿ ಪಡೆದಿತ್ತು. ತನ್ನ ನೋವನ್ನು ನಾಗರಾಜ್ ಬಳಿ ಹೇಳಿಕೊಂಡು ಮಾದ ಕಣ್ಣೀರಿಟ್ಟಿದ್ದ. ಬಳಿಕ ಹಸು ಕೊಂದ ಹುಲಿ ಕೊಲ್ಲಲು ಇಬ್ಬರು ನಿರ್ಧರಿಸಿದ್ದರು. ಹಾಗಾಗಿ ಹುಲಿ ಕೊಲ್ಲಲು ಕ್ರಿಮಿನಾಶಕ ಕೂಡ ತಂದಿದ್ದರು. ಹುಲಿಗಳನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪಿಗಳಿಗೆ ಕೂನಪ್ಪ ನೆರವು ನೀಡಿದ್ದರು. ನಾಗರಾಜ್ ಮೃತ ಹಸುವಿಗೆ ಕ್ರಿಮಿನಾಶಕ ಹಾಕಿ ಬಂದಿದ್ದ. ಮರುದಿನ ವಿಷಪೂರಿತ ಹಸುವಿನ ಮಾಂಸ ತಿಂದು ಹುಲಿ ಮರಿಗಳು ಸತ್ತಿದ್ದವು. ಸದ್ಯಕ್ಕೆ ಹುಲಿ ಅಂತ್ಯ ಸ್ಥಳದಲ್ಲೇ ಅಂತಿಮ ಸಂಸ್ಕಾರ ಮಾಡಲಾಗಿದೆ.
Next article
- Advertisement -spot_img

More articles

- Advertisement -spot_img

Latest article