ರಾಜಕೀಯ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರ: ಡಿ.ಕೆ. ಸುರೇಶ್ ಹೇಳಿದ್ದೇನು..?

Date:

ರಾಜಕೀಯ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರ: ಡಿ.ಕೆ. ಸುರೇಶ್ ಹೇಳಿದ್ದೇನು..?

ಬೆಂಗಳೂರು:“ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ.ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯಿಸಿದರು. ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.
ರಾಜ್ಯಕ್ಕೆ ಕೆ.ಸಿ. ವೇಣುಗೋಪಾಲ್ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ, “ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಅವರು ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.
ಮಂಗಳೂರಿನಲ್ಲಿ ವೇಣುಗೋಪಾಲ್ ಅವರಿಗೆ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಡಿ.ಕೆ., ಡಿ.ಕೆ. ಎಂದು ಕೂಗಿರುವ ಬಗ್ಗೆ ಕೇಳಿದಾಗ, “ಅಭಿಮಾನದಿಂದ ಕೆಲವರು ಕೂಗಿರುತ್ತಾರೆ. ಆದರೆ ಅವರು ಯಾರಿಗೂ ಮುತ್ತಿಗೆ ಹಾಕಿಲ್ಲ” ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...