No menu items!
29.6 C
Munich
Thursday, June 18, 2026

ರಾಜಧಾನಿ ಬೆಂಗಳೂರಿನಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

Must read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಲೆಗೆ ಬಿಡುವಾಗ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು ಎಂದು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಶಾಲಾ ಆಟೋ, ಖಾಸಗಿ ಕಾರು, TT ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ರಸ್ತೆಯುದ್ದಕ್ಕೂ ಪೊಲೀಸರಿದ್ರು ಕೆಲ ವಾಹನ ಸವಾರರು ಕೇರ್ ಮಾಡಲ್ಲ. ಸಂಚಾರ ನಿಯಮ ಉಲ್ಲಂಘನೆ ಮಾಡೋದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಪ್ರತಿದಿನ ಸಂಚಾರ ನಿಯಮ‌ ಉಲ್ಲಂಘನೆ ಮಾಡಿ ನಮಗೂ ಅದಕ್ಕೂ ಸಂಬಂಧವೇ ಇಲ್ಲ ಅನ್ನೋ‌ ರೀತಿ ಇದ್ದಾರೆ. ಅಂತಹ ವಾಹನ ಸವಾರರಿಗೆ ಶಾಕ್ ಕೊಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಮನೆ ಮನೆಗೆ ತೆರಳಿ ದಂಡ ವಸೂಲಿ ಮಾಡೊ ಕೆಲಸ ಶುರು ಮಾಡಿದ್ದಾರೆ‌.

- Advertisement -spot_img

More articles

- Advertisement -spot_img

Latest article