ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ : ಬಿಎಸ್ ವೈ

Date:

ನವದೆಹಲಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಮಾಧ್ಯಮಗಳ ಜೊತೆ ಸಿಎಂ ಯಡಿಯೂರಪ್ಪ ಮಾತನಾಡಿದರು. ನಿನ್ನೆ ಪ್ರಧಾನಿಗಳನ್ನು ಭೇಟಿಯಾಗಿದ್ದು, ಆ ರೀತಿಯ ಮಾತುಕತೆಗಳು ನಡೆದಿಲ್ಲ. ನಾನು ರಾಜೀನಾಮೆಯನ್ನೂ ನೀಡಿಲ್ಲ. ರಾಜ್ಯದ ಅಭಿವೃದ್ಧಿ ಕುರಿತ ಮಾತನಾಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಬರುತ್ತಿದ್ದೇನೆ. ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಎಲ್ಲ ಗಾಳಿಸುದ್ದಿಗಳಿಗೆ ಮುಖ್ಯಮಂತ್ರಿಗಳು ತೆರೆ ಎಳೆದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ರಾಜ್ಯಕ್ಕೆ ಹಿಂದಿರುಗಲಿದ್ದಾರೆ.

ಶುಕ್ರವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಭೇಟಿಯಾಗಿದ್ದರು. ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್‍ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಹೇಳಿದ್ದರು. ಜೊತೆಗೆ ರಾಜ್ಯದ ನೂತನ ಸಚಿವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ವದಂತಿಗಳ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಸಿಎಂ ಜೊತೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಲೆಹರ್ ಸಿಂಗ್ ಸೇರಿದಂತೆ 7 ಮಂದಿ ಜೊತೆಗಿದ್ದಾರೆ.

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...