ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಶ್ರೀಹರನ್ ಇಂದು ಒಂದು ತಿಂಗಳ ಪೆರೋಲ್ ಮೇಲೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.
ಕಳೆದ 29 ವರ್ಷಗಳಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಯನ್ನು ನಳಿನಿ ಶ್ರೀಹರನ್ ಅನುಭವಿಸುತ್ತಿದ್ದಾರೆ.ಸದ್ಯ ನಳಿನಿ ಶ್ರೀಹರನ್ ವೆಲ್ಲೂರಿನ ಮಹಿಳಾ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
1991ರ ಮೇ. 21ರಂದು ತಮಿಳುನಾಡಿನಲ್ಲಿ ಚುನಾವಣೆ ರ್ಯಾಲಿಗೆ ಆಗಮಿಸಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರನ್ನ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಳಿನಿ, ಅವರ ಪತಿ ಮುರುಗನ್ ಸೇರಿ ಒಟ್ಟು ಏಳು ಮಂದಿಯನ್ನ ಕೋರ್ಟ್ ಅಪರಾಧಿಗಳು ಎಂದು ಘೋಷಿಸಿತ್ತು. ಎಲ್ಲರಿಗೂ ಗಲ್ಲು ಶಿಕ್ಷೆ ಪ್ರಕಟವಾಗಿತ್ತು. ನಂತರ ಇದನ್ನ ಜೀವಿತಾವಧಿ ಶಿಕ್ಷೆಯಾಗಿ ಮಾರ್ಪಾಟು ಮಾಡಲಾಗಿದೆ.