ರಾಜ್ಯಕ್ಕೆ ಬಿಜೆಪಿಯ ಚಾಣಕ್ಯ ಅಮಿತ್ ಶಾ ಎಂಟ್ರಿ.!

By
1 Min Read

ಬೆಂಗಳೂರು: ಬಿಜೆಪಿಯ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ. ಕಾಂಗ್ರೆಸ್ನ ಪ್ರಮುಖ ನಾಯಕರಾದ ಡಿಕೆ ಸಹೋದರರ ಕೋಟೆಯಿಂದಲೇ ರಣಕಹಳೆ ಮೊಳಗಿಸಲಿದ್ದಾರೆ. ಹಳೆ ಮೈಸೂರು ಭಾಗವನ್ನೇ ಅಮಿತ್ ಶಾ ಗುರಿಯಾಗಿಸಿಕೊಂಡಿದ್ದಾರೆ. ಇಂದು ಸಂಜೆ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ನ ಮಂಜುನಾಥ್ ಪರ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಚನ್ನಪಟ್ಟಣದಿಂದಲೇ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.
ದೆಹಲಿಯಿಂದ ಸೋಮವಾರ ರಾತ್ರಿ 11 ಗಂಟೆಗೆ ಅಮಿತ್ ಶಾ ಬೆಂಗಳೂರಿಗೆ ಬರುತ್ತಾರೆ ಎನ್ನಲಾಗಿತ್ತು. ಆದರೆ ಬದಲಾದ ಸಮಯದಲ್ಲಿ ಮಧ್ಯರಾತ್ರಿ 2.30ಕ್ಕೆ ಹೆಚ್‌ಎಎಲ್‌ ಏರ್‌ಪೋರ್ಟ್‌ಗೆ ಬಂದಿಳಿದರು. ನಂತರ ನೇರವಾಗಿ ತಾಜ್‌ ವೆಸ್ಟ್‌ಎಂಡ್‌ ಹೋಟೆಲ್‌ಗೆ ತೆರಳಿ ವಾಸ್ತವ್ಯ ಹೂಡಿದರು.
ಬೆಳಗ್ಗೆ 9.30ಕ್ಕೆ ತಾಜ್‌ವೆಸ್ಟ್ಎಂಡ್ ಹೋಟೆಲ್‌ನಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಲಿದ್ದಾರೆ. ಗೆಲುವಿನ ಸೂತ್ರ ಮುಂದಿಡಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಉಂಟಾಗಿರುವ ಬಿಜೆಪಿ ಟಿಕೆಟ್ ವಂಚಿತರ ಅಸಮಾಧಾನ ಶಮನ ಬಗ್ಗೆಯೂ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆಯಿದೆ.

Share This Article