ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ..!

0
45

ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು.
ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.
ಬರ ಪರಿಹಾರ ನೀಡಲು ಒಂದು ವಾರ ಬೇಕು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. “ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು” ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಏಪ್ರಿಲ್‌ 29ಕ್ಕೆ ವಿಚಾರಣೆ ಮುಂದೂಡಿತ್ತು. ಈಗ ವಿಚಾರಣೆಗೂ ಮೊದಲೇ ಬರ ಪರಿಹಾರ ಬಿಡುಗಡೆ ಮಾಡಿದೆ.