ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳಿಕೊಳ್ಳುತ್ತದೆ. ಆದರೆ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಕುಂದಗೋಳದಲ್ಲಿ ಮತಯಾಚಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮಾನ-ಮರ್ಯಾದೆ, ಪಂಚೇಂದ್ರಿಯಗಳಿಲ್ಲದ ಸರ್ಕಾರ. ಇವರು ಯಾವುದೇ ರೈತರ ಸಾಲಮನ್ನಾ ಮಾಡಿಲ್ಲ. ಬರಗಾಲ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಆರೋಪಿಸಿದರು