ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ!

Date:

ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ!

 

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್‌ 1 ರಿಂದ ಅಂದರೆ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಎದುರಿಸಲು ಸಕಲ ರೀತಿಯಲ್ಲಿ ಸಿದ್ಧರಾಗಿದ್ದಾರೆ.

ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಎಕ್ಸಾಂಗೂ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ.

ಒಟ್ಟು 1,171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪರೀಕ್ಷಾ ನಿಯಮಗಳು?

>. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ.

>. ಪಿಯುಸಿ ಎಕ್ಸಾಂ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇರಲಿದೆ.

>. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಬೇಕು.

>. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ.

>. ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮ.

>. ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್.

>. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.

Share post:

Subscribe

spot_imgspot_img

Popular

More like this
Related

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರು:...

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ ಚಿಕ್ಕಬಳ್ಳಾಪುರ:...

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್, ಕಲಬುರಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್, ಕಲಬುರಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ ಚಿಕ್ಕಬಳ್ಳಾಪುರ:...