No menu items!
16.9 C
Munich
Monday, June 15, 2026

ರಾಜ್ಯದಲ್ಲಿ ಇಂದು ಮಳೆ ಅಬ್ಬರ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Must read

ರಾಜ್ಯದಲ್ಲಿ ಇಂದು ಮಳೆ ಅಬ್ಬರ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದ್ದು, ಇಂದು ಸಹ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಯಾವ ಜಿಲ್ಲೆಗಳಿಗೆ ಅಲರ್ಟ್?
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗಗಳು ಹಾಗೂ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article