No menu items!
8.7 C
Munich
Tuesday, June 16, 2026

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Must read

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಕೆಲ ದಿನಗಳ ಕಾಲ ರಾಜ್ಯದಾದ್ಯಂತ ನಿರಂತರ ಮಳೆಯ ಮುನ್ಸೂಚನೆ ನೀಡಿದೆ. ಹೌದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯಂತೆ ಕರ್ನಾಟಕ ರಾಜ್ಯವು ನಿರಂತರ ಮಳೆಯ ನಿರೀಕ್ಷೆಯಲ್ಲಿದೆ.
ಕರ್ನಾಟಕದ ಹಲವು ಪ್ರದೇಶಗಳಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈಗ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement -spot_img

More articles

- Advertisement -spot_img

Latest article