No menu items!
12.4 C
Munich
Wednesday, April 29, 2026

ರಾಜ್ಯದಲ್ಲಿ ಈ ತಾರೀಖಿನಿಂದ ಸಿಕ್ಕಾಪಟ್ಟೆ ಮಳೆ!

Must read

ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿ ವಾರ ಕಳೆದಿದೆ ಆದರೆ ಬಹುತೇಕ ಕಡೆಗಳಲ್ಲಿ ಇನ್ನೂ ಮಳೆ ಶುರುವಾಗಿಲ್ಲ. ಹಲವು ಜಿಲ್ಲೆಗಳಲ್ಲಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಮಳೆ ಬರುತ್ತಿದೆ, ಜೂನ್ 13 ರಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜೂನ್ 14 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳ ಬಳಿಕ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article