ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ ಪತನಕ್ಕೂ ಕಾರಣವಾಗಬಹುದು. ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯವರು ಹೇಳಿದ್ದಾರೆ. ನಾನು ಕೂಡಾ ಮೂರು ತಿಂಗಳ ಹಿಂದೆ ಹೇಳಿದ್ದೇನೆ ಎಂದರು.
ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಆಡಳಿತ ವೈಫಲ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುತ್ತಿಲ್ಲ. ನೇಹಾ ಕೊಲೆಯಾದ ಬಳಿಕ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ ಈ ಪ್ರಕರಣವನ್ನು ಸುಲಭವಾಗಿ ತೆಗೆದುಕೊಂಡಿದ್ದಾರೆ. ಆರೋಪಿ ಮನೆ ಹೊಕ್ಕು ಅಂಜಲಿ ಹತ್ಯೆ ಮಾಡಿದ್ದು, ಜನ ಭಯ ಭೀತರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಇದಕ್ಕೆ ಸಿಎಂ ಹಾಗೂ ಡಿಸಿಎಂ ಜವಾಬ್ದಾರಿ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಸಿಎಂ, ಡಿಸಿಎಂ ಕಾರಣ !
Date: