ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಲವು ಸಮಸ್ಯೆಗಳು ತಲೆದೋರಿವೆ: ಪ್ರತಾಪ ಸಿಂಹ

Date:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಲವು ಸಮಸ್ಯೆಗಳು ತಲೆದೋರಿವೆ: ಪ್ರತಾಪ ಸಿಂಹ

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಲವು ಸಮಸ್ಯೆಗಳು ತಲೆದೋರಿವೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ನಡೆನುಡಿಯಲ್ಲಿ ಹಿಂದೂ ಧರ್ಮದ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನಗಳಲ್ಲಿ ಮಾಂಸಾಹಾರ ಸೇವನೆ ಕುರಿತು ಕೂಡ ಟೀಕಿಸಿದರು.
ಇತ್ತೀಚೆಗೆ ಕಾಂಗ್ರೆಸ್ ನಾಯಕರು ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದ ಅವರು, ನಾಗಮಂಗಲದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ನಡೆದ ಕಲ್ಲುತೂರಾಟವನ್ನು ಸಣ್ಣ ಘಟನೆ ಎಂದು ಮುಖ್ಯಮಂತ್ರಿ ಹೇಳಿದ್ದನ್ನು ಪ್ರಶ್ನಿಸಿದರು. ಮದ್ದೂರು, ಅಣ್ಣಮ್ಮ ಜಾತ್ರೆ ಹಾಗೂ ಶಿವಾಜಿ ಜಯಂತಿ ಸಂದರ್ಭದಲ್ಲಿಯೂ ಕಲ್ಲುತೂರಾಟ ನಡೆದಾಗ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಆರ್ಥಿಕ ವಿಚಾರ ಪ್ರಸ್ತಾಪಿಸಿದ ಪ್ರತಾಪಸಿಂಹ, ರಾಜ್ಯದ ಸಾಲ ಪ್ರಮಾಣ ಹೆಚ್ಚಾಗಿದ್ದು, ಪ್ರತಿ ವ್ಯಕ್ತಿಯ ಮೇಲೂ ಸುಮಾರು ₹1.17 ಲಕ್ಷ ಸಾಲದ ಭಾರವಿದೆ ಎಂದು ಹೇಳಿದರು. ಒಟ್ಟು ಸಾಲ ₹8.25 ಲಕ್ಷ ಕೋಟಿ ತಲುಪಿದೆ ಎಂದು ಆರೋಪಿಸಿದರು.
ಕೆಂಗಲ್ ಹನುಮಂತಯ್ಯರಿಂದ ಬಸವರಾಜ್ ಬೊಮ್ಮಾಯಿ ಅವರವರೆಗೆ ಎಲ್ಲಾ ಮುಖ್ಯಮಂತ್ರಿಗಳು ಮಾಡಿದ ಸಾಲಕ್ಕಿಂತಲೂ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಹೆಚ್ಚು ಸಾಲವಾಗಿದೆ ಎಂದು ಆರೋಪಿಸಿ, “ಸಾಲಾರಾಮಯ್ಯ” ಎಂದು ಟೀಕಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿ ನೇಣಿಗೆ ಶರಣು!

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿ ನೇಣಿಗೆ ಶರಣು! ಬೆಂಗಳೂರು ನಗರದ ಕಬ್ಬನ್...

ರಾಜ್ಯದಲ್ಲಿ ಇಂದು ಮಳೆ ಅಬ್ಬರ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಇಂದು ಮಳೆ ಅಬ್ಬರ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...