ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ !

Date:

ಮಡಿಕೇರಿ: ದೇಶದ ಕೆಲ ರಾಜ್ಯಗಳಲ್ಲಿ ಸೈಲೆಂಟ್ ಆಗಿ ಕೊರೋನಾ ಉಲ್ಬಣವಾಗ್ತಿರೋದು ಮತ್ತೆ ಆ ದಿನಗಳು ಬರುತ್ತಾ ಅನ್ನೋ ಪ್ರಶ್ನೆ ಮೂಡಿದೆ.. ಕೇರಳದಲ್ಲಿ ಕೊರೋನಾ ನರ್ತನದಿಂದ ಅಲರ್ಟ್ ಆಗಿರೋ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಹೌದು ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು.
ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...