ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: ಧಾರವಾಡದಲ್ಲಿ ಬಾಲಕಿ ಸಾವು

Date:

ಬೆಂಗಳೂರು: ಮಲೇರಿಯಾದಂತೆ ಸೊಳ್ಳೆಗಳಿಂದ ಹರಡುವ ಮತ್ತು ಆರೋಗ್ಯಕ್ಕೆ ಮಾರಕವಾಗಿರುವ ಇನ್ನೊಂದು ಕಾಯಿಲೆ ಎಂದರೆ ಡೆಂಗ್ಯೂ ಜ್ವರ. ಸೊಳ್ಳೆಗಳಿಂದ ಹರಡುವ ಈ ಕಾಯಿಲೆಯಿಂದಾಗಿ ಸಾವು ಕೂಡ ಸಂಭವಿಸಬಹುದು.
ಇದರ ನಡುವೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಸಾವಿರದ ಗಡಿಯತ್ತ ದಾಖಲಾಗಿವೆ. ಒಂದು ತಿಂಗಳಿನಲ್ಲಿ ನೂರಾರು ಕೇಸ್ ದಾಖಲಾಗಿವೆ. ಪ್ರತಿನಿತ್ಯ 50-60 ಪ್ರಕರಣಗಳು ದಾಖಲಾಗುತ್ತಿವೆ. ಈ ಮಧ್ಯೆ ಮಳೆಯಿಂದಲೂ ಡೆಂಗ್ಯೂ ಕೇಸ್‍ಗಳು ಹೆಚ್ಚಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗರಾಜ್ ಎಂಬವರು ಗುರುವಾರ ಮೃತಪಟ್ಟಿದ್ದರು. ಇದೂ ಸಹ ಡೆಂಗ್ಯೂವಿನಿಂದಲೇ ಎಂಬ ಅನುಮಾನ ವ್ಯಕ್ತವಾಗಿದೆ.
ರಾಜ್ಯದಲ್ಲಿ ಪ್ರಸಕ್ತ ವರ್ಷ 4,414 ಡೆಂಗ್ಯೂ, 778 ಚಿಕುನ್ಗುನ್ಯಾ ಪ್ರಕರಣಗಳು ಪತ್ತೆ ಆಗಿವೆ. ಈ ನಡುವೆ ಕಳೆದ 10 ದಿನಗಳಲ್ಲಿ ಬರೋಬ್ಬರಿ 1,026 ಡೆಂಗ್ಯೂ, 137 ಚಿಕೂನ್ ಗುನ್ಯಾ ಪಾಸಿಟಿವ್ ಬಂದಿದ್ದು ಆತಂಕ ಮೂಡಿಸಿದೆ. ಚಿಕೂನ್ಗುನ್ಯಾಕ್ಕಿಂತ ಡೆಂಗ್ಯೂ ಹಾವಳಿಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...