No menu items!
5.4 C
Munich
Thursday, April 30, 2026

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Must read

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಒಣ ಹವೆಯಿರಲಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘು ಮಳೆಯ ಸಾಧ್ಯತೆಯಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾವೇರಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. ಗಾಳಿಯ ವೇಗ ಗಂಟೆಗೆ 11 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article