No menu items!
20.4 C
Munich
Tuesday, May 5, 2026

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

Must read

ಬೆಂಗಳೂರು:ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಮೇಲೆ ಇದರ ಪರಿಣಾಮ ಹೆಚ್ಚಾಗಿ ಇರದಿದ್ದರೂ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಂಗಾಲಕೊಲ್ಲಿ ದಕ್ಷಿಣ ಭಾಗದಲ್ಲಿ ಉಂಟಾಗಿದ್ದ ಲಘು ವಾಯುಭಾರ ಕುಸಿತವು ತೀವ್ರವಾಗಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ತಮಿಳುನಾಡು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಪೂರ್ವ ಈಶಾನ್ಯದ ಕಡೆಗೆ ಚಂಡಮಾರುತವು ಚಲಿಸುವ ಸಾಧ್ಯತೆ ಇರುವುದರಿಂದ ರಾಜ್ಯದ ಮೇಲೆ ನೇರ ಪರಿಣಾಮವಾಗುವುದಿಲ್ಲ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುವ ಜೊತೆಗೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ, ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ. ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಆದರೂ ಇದೇ ಸಂದರ್ಭದಲ್ಲಿ ಭಾರಿ ಮಳೆ ಬರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -spot_img

More articles

- Advertisement -spot_img

Latest article