ರಾಜ್ಯದಲ್ಲಿ ಮುಂದುವರಿದ ಒಣಹವೆ: ಬೆಂಗಳೂರಿನಲ್ಲಿ ಕನಿಷ್ಠ 17°C ದಾಖಲು

Date:

ರಾಜ್ಯದಲ್ಲಿ ಮುಂದುವರಿದ ಒಣಹವೆ: ಬೆಂಗಳೂರಿನಲ್ಲಿ ಕನಿಷ್ಠ 17°C ದಾಖಲು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಹತ್ತಾರು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿದಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಇಂದೂ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಐಎಂಡಿ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಸಾಧ್ಯತೆ ಇಲ್ಲದೆ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆ ಆವರಿಸಿದ್ದು, ಇಂದೂ ಅದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 17°C ಹಾಗೂ ಗರಿಷ್ಠ 31°C ದಾಖಲಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳ ಚಳಿಯ ತೀವ್ರತೆ ತಗ್ಗಿದರೂ ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಚಳಿಯ ಅನುಭವ ಮುಂದುವರಿದಿದೆ.

ಚಳಿಗಾಲದ ಪರಿಣಾಮವಾಗಿ ಜನರಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಸೇವಿಸುವುದು ಮತ್ತು ಚಳಿಯಿಂದ ರಕ್ಷಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ವಿಶೇಷವಾಗಿ ಮಕ್ಕಳು ಹಾಗೂ ವೃದ್ಧರು ಎಚ್ಚರಿಕೆಯಿಂದಿರಬೇಕೆಂದು ಸೂಚಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಧಾರವಾಡ ಹೈಕೋರ್ಟ್ ಪೀಠ ಸೇರಿ ಮೂರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಧಾರವಾಡ:...

35ರ ನಂತರ, ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಈ ಪರೀಕ್ಷೆಗಳನ್ನು ಮಾಡಿಸಿ!

35ರ ನಂತರ, ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಈ ಪರೀಕ್ಷೆಗಳನ್ನು ಮಾಡಿಸಿ! 35 ವರ್ಷದ...

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ ವೇದಿಕೆ ಸಿದ್ಧ

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ...

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...