ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Date:

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ  ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದ್ದರೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಅದರಲ್ಲೂ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳ ಭಾಗಗಳಲ್ಲಿ ಮಳೆ ತುಸು ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನಲ್ಲಿ ತುಸು ಮಳೆ
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.

ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಶೇಕಡಾ 80 ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ಗಾಳಿಯ ವೇಗ ಗಂಟೆಗೆ 14 ರಿಂದ 20 ಕಿ.ಮೀ ಇರಲಿದ್ದು, ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ರಿಂದ 26 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share post:

Subscribe

spot_imgspot_img

Popular

More like this
Related

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ: ಡಿ.ಕೆ.ಶಿವಕುಮಾರ್

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ:...

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ!

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ನಮ್ಮ ದೇಹವು ಕೆಲವೊಮ್ಮೆ...

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...