ಪಕ್ಷದ ವರಿಷ್ಠರ ಸೂಚನೆ ಮೇರೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರಕಾರವನ್ನು ಬೀಳಿಸುವುದಿಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿದ್ದಾರೆ.
ಇದರಿಂದಾಗಿ ಸದ್ಯಕ್ಕೆ ಸಮ್ಮಿಶ್ರ ಸರ್ಕಾರ ಸೇಫ್ ಆಗಿದ್ದು, ಸಂಪುಟ ವಿಸ್ತರಣೆ ಮಾಡಲು ಮುಂದಾಗಿದೆ. ಆದರೆ, ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ. ಬದಲಿಗೆ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿರುವಂತೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಬರುವ ಸಾಧ್ಯತೆ ಇದೆ. ಬಿಜೆಪಿ ಸರ್ಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಯಡಿಯೂರಪ್ಪ ಅವರಿಂದ ಕೇಂದ್ರ ಸರ್ಕಾರ ಹೇಳಿಸಿ ಜಾಣ್ಮೆಯನ್ನು ಪ್ರದರ್ಶಿಸಿದೆ.
ತೆರೆಮರೆಯಲ್ಲಿ ರಾಜ್ಯಪಾಲರ ಆಡಳಿತ ಹೇರುವ ಸಾಧ್ಯತೆ ಇದೆ.ಕೆಲವೇ ತಿಂಗಳಲ್ಲಿ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದೇ ವೇಳೆ ರಾಜ್ಯದಲ್ಲಿ ಚುನಾವಣೆ ನಡೆಸಲು ಬಿಜೆಪಿ ರಹಸ್ಯ ಕಾರ್ಯತಂತ್ರ ರೂಪಿಸಿದೆ ಎಂದು ಅವರು ಆರೋಪಿಸಿದ್ದಾರೆ.