ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ – ಟಫ್ ರೂಲ್ಸ್ ಜಾರಿ

Date:

ರಾಜ್ಯದಲ್ಲಿ ಕೊರೊನಾ ಪ್ರಕರಣ ಕೈಮೀರಿರುವ ಬೆನ್ನಲ್ಲೇ ರಾಜ್ಯ ಸರಕಾರ ಹೊಸ ಕೋವಿಡ್‌ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ವಾರಾಂತ್ಯ ಕರ್ಫ್ಯೂ ಜಾರಿ ಮಾಡಿದೆ. ಮೇ 4ರವರೆಗೆ ರಾಜ್ಯದಲ್ಲಿ ಟಫ್‌ ರೂಲ್ಸ್‌ ಜಾರಿಯಲ್ಲಿರಲಿದೆ.

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ವೀಕೆಂಡ್‌ ಕರ್ಪ್ಯೂ ಜಾರಿಯಲ್ಲಿರಲಿದೆ. ಉಳಿದಂತೆ ವಾರದ ದಿನಗಳಲ್ಲಿ ನೈಟ್‌ ಕರ್ಪ್ಯೂ (ರಾತ್ರಿ 9ರಿಂದ ಬೆಳಗ್ಗೆ 6 ಗಂಟೆವರೆಗೆ) ಜಾರಿಯಲ್ಲಿರಲಿದೆ . ಬೆಂಗಳೂರು ಸೇರಿದಂತೆ ಇಡೀ ರಾಜ್ಯಕ್ಕೆ ವೀಕೆಂಡ್‌ ಕರ್ಫ್ಯೂ ಅನ್ವಯವಾಗುತ್ತದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ತಿಳಿಸಿದ್ದಾರೆ.

ನೈಟ್‌ ಕರ್ಪ್ಯೂ ಸಮಯದಲ್ಲಿ ಕೂಡ ಬದಲಾವಣ ಮಾಡಲಾಗಿದೆ. ರಾತ್ರಿ 10ರ ಬದಲು, ರಾತ್ರಿ 9 ಗಂಟೆಯಿಂದಲೇ ಕರ್ಫ್ಯೂ ಆರಂಭವಾಗಿ, ಬೆಳಗ್ಗೆ 6 ಗಂಟೆವೆರೆಗೆ ಜಾರಿಯಲ್ಲಿರಲಿದೆ. ವಾರಾಂತ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗಿದ್ದು, ಅನಗತ್ಯವಾಗಿ ಯಾರೂ ಹೊರಗೆ ಬರುವಂತಿಲ್ಲ.

ಮದ್ಯದ ಅಂಗಡಿಗಳು ಕೂಡ ಬಂದ ಆಗಲಿದೆ. ಬಾರ್‌ಗಳಲ್ಲಿ ಕುಳಿತು ಮದ್ಯ ಸೇವಿಸಲು ಅವಕಾಶವಿಲ್ಲ. ಆದರೆ ಮದ್ಯವನ್ನು ಪಾರ್ಸಲ್‌ ಪಡೆಯಲು ಅವಕಾಶವಿದೆ. ಮದುವೆ ಮಂಟಪಗಳಲ್ಲಿ ಕೇವಲ 50 ಮಂದಿ ಮಾತ್ರ ಸೇರಲು ಅವಕಾಶ ನೀಡಲಾಗಿದೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...