No menu items!
19.6 C
Munich
Friday, May 1, 2026

ರಾಜ್ಯದಲ್ಲಿ ಶುಷ್ಕ ವಾತಾವರಣ ಮುಂದುವರಿಕೆ; ಇನ್ನೆರಡು ದಿನ ಚಳಿ ಪ್ರಭಾವ ಹೆಚ್ಚಳ

Must read

ರಾಜ್ಯದಲ್ಲಿ ಶುಷ್ಕ ವಾತಾವರಣ ಮುಂದುವರಿಕೆ; ಇನ್ನೆರಡು ದಿನ ಚಳಿ ಪ್ರಭಾವ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣ ಮುಂದುವರಿದಿದ್ದು, ಇಂದೂ ಸಹ ಅದೇ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಮುಂದಿನ ಇನ್ನೆರಡು ದಿನಗಳ ಕಾಲ ಇದೇ ಹವಾಮಾನ ಮುಂದುವರಿಯಲಿದ್ದು, ಆ ಬಳಿಕ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಯಾವುದೇ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣ ಮುಂದುವರಿಯಲಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಂಡುಬರುತ್ತಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

ರಾಜಧಾನಿಯಲ್ಲಿ ಚಳಿ ತೀವ್ರ

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article