No menu items!
7.2 C
Munich
Thursday, April 30, 2026

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Must read

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಇಂದು ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡು ಪ್ರದೇಶಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಒಣ ಹವೆಯಿರಲಿದೆ.

ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ,

ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಬಹುದು. ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ, ಒಣ ವಾತಾವರಣವಿರಲಿದೆ.

- Advertisement -spot_img

More articles

- Advertisement -spot_img

Latest article