No menu items!
8.4 C
Munich
Tuesday, April 21, 2026

ರಾಜ್ಯದಲ್ಲಿ 10 ಸಾವಿರ ಗಡಿದಾಟಿದ ಕೊರೊನಾ ಹೊಸ ಕೇಸ್!

Must read

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದಂತೆ ಹರಡುತ್ತಿದೆ. ಒಂದೇ ದಿನದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿದಾಟಿದೆ. ಬೆಂಗಳೂರು ನಗರ ಒಂದರಲ್ಲೇ ಏಳೂವರೆ ಸಾವಿರ ಪ್ರಕರಣಗಳು ಪತ್ತೆಯಾಗಿದ್ದು, ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.

ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಸೋಂಕಿನಿಂದ 40 ಮಂದಿ ಮೃತಪಟ್ಟಿದ್ದಾರೆ. ಒದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಒಟ್ಟು12,889ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ನಗರ ಒಂದರಲ್ಲೇ ಇಂದು 7,584 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 4,81,982ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 27 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 2,638 ಸೋಂಕಿತರು ಸಂಪೂರ್ಣ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ. ಆದರೆ, ರಾಜ್ಯದಲ್ಲಿ ದಿನೇದಿನೆ ಸಕ್ರಿಯ ಪ್ರಕರಣಗಳು ಹೆಚ್ಚುತ್ತಿವೆ.

ಪ್ರಸ್ತುತ 69,225 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 440 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಸೋಂಕಿತರ ಪ್ರಮಾಣ (ಪರೀಕ್ಷೆಗೆ ಒಳಪಟ್ಟವರಲ್ಲಿ) ಶೇ.7.72ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ. 0.39ರಷ್ಟಿದೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article