No menu items!
29.2 C
Munich
Saturday, July 11, 2026

ರಾಜ್ಯದಾದ್ಯಂತ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ..! ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್

Must read

ರಾಜ್ಯದಾದ್ಯಂತ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ..! ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪದಾನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಎಲ್ಲೆಲ್ಲಿ ದಾಳಿ ನಡೆದಿದೆ
8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

- Advertisement -spot_img

More articles

- Advertisement -spot_img

Latest article