No menu items!
10.8 C
Munich
Wednesday, April 29, 2026

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

Must read

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಿನ್ನೆ ಸಡಿಲ ಮಳೆಯಾಗಿದ್ದರೂ, ಇಂದು ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಸಹ ಮಂಜು ಮುಸುಕಿದ ಬೆಳಗ್ಗೆ ಹಾಗೂ ಇನ್ನೆರಡು ದಿನ ತೀವ್ರ ಚಳಿ ಕಾಣಿಸಿಕೊಳ್ಳಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಲಕ್ಷಣ ಇದೀಗ ಕಡಿಮೆಯಾಗಿದ್ದು, ಒಣ ಹವೆಯೇ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇಲ್ಲ ಎಂದು ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವಾಮಾನವೇ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಂಜು ಕವಿದ ಬೆಳಗ್ಗೆ ಕಂಡುಬಂದಿದ್ದು,

ಗಾಳಿಯ ವೇಗ: ಪ್ರತಿ ಗಂಟೆಗೆ 13 ಕಿ.ಮೀ

ಗರಿಷ್ಠ ತಾಪಮಾನ: 26.8°C

ಕನಿಷ್ಠ ತಾಪಮಾನ: 17°C

ಕಳೆದ ಕೆಲ ದಿನಗಳಿಂದ ನಗರದಲ್ಲಿ ತೀವ್ರ ಚಳಿಯಿದ್ದು, ಮುಂದಿನ ಎರಡು ದಿನ ವಾತಾವರಣ ಇದೇ ರೀತಿಯಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -spot_img

More articles

- Advertisement -spot_img

Latest article